ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profileg
ನಾರಾಯಣಗೌಡ್ರು.ಟಿ.ಎ | ‌Narayanagowdru T.A.

@narayanagowdru

ರಾಜ್ಯಾಧ್ಯಕ್ಷರು, ಕರ್ನಾಟಕ ರಕ್ಷಣಾ ವೇದಿಕೆ

ID:200834143

linkhttp://www.karnatakarakshanavedike.org calendar_today10-10-2010 11:47:12

3,1K Tweets

13,8K Followers

1 Following

ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

40ಕ್ಕೂ ಹೆಚ್ಚು ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿ ಕನ್ನಡ ಚಿತ್ರರಂಗವನ್ನು ಬೆಳೆಸಿದ ದ್ವಾರಕೀಶ್ ಅವರು ನಮ್ಮನ್ನಗಲಿದ್ದಾರೆ. ಅತ್ಯುತ್ತಮ ನಟ, ನಿರ್ದೇಶಕರೂ ಆಗಿದ್ದ ದ್ವಾರಕೀಶ್ ನಿಧನದೊಂದಿಗೆ ಕನ್ನಡ ಚಿತ್ರರಂಗದ ದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ. ಹಿರಿಯ ಜೀವಕ್ಕೆ ಅಭಿಮಾನದ ನಮಗಳು. ನಿಮ್ಮ ಸ್ಮರಣೆ ಸದಾ ಇರುತ್ತದೆ.

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಗೋವಾ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಮೇಲಿಂದ ಮೇಲೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವುದೇ ಅದರ ದೊಡ್ಡ ಅಜೆಂಡಾ ಆಗಿದೆ. ಹೀಗಾಗಿ ಈ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸುತ್ತೇನೆ. (7/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

2005ರಲ್ಲಿ ಬೈನಾದಲ್ಲಿದ್ದ 1,162 ಕನ್ನಡಿಗ ಕುಟುಂಬಗಳನ್ನು ಬೀದಿಪಾಲು ಮಾಡಲಾಯಿತು. 2014ರಲ್ಲಿ 70 ಕುಟುಂಬ, 2015ರಲ್ಲಿ 157 ಕುಟುಂಬಗಳನ್ನು ಬೈನಾದಲ್ಲಿಯೇ ತೆರವುಗೊಳಿಸಲಾಯಿತು. 2017ರಲ್ಲಿ ಮಂಗೂರ್ ಹಿಲ್ಸ್ ನಲ್ಲಿ 211 ಕುಟುಂಬಗಳನ್ನು, 2019ರಲ್ಲಿ ಝರಿ ಪ್ರದೇಶದಲ್ಲಿದ್ದ 62 ಕುಟುಂಬಗಳನ್ನು ಗೋವಾ ಸರ್ಕಾರ ಒಕ್ಕಲೆಬ್ಬಿಸಿತ್ತು. (6/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಭಾರತದ ಸಂವಿಧಾನದ 29 ಮತ್ತು 30ನೇ ವಿಧಿಗಳು ಸ್ಪಷ್ಟವಾಗಿ ಭಾಷಾ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುತ್ತವೆ. ಗೋವಾದಲ್ಲಿ ನಡೆಯುತ್ತಿರುವುದು ಸಂವಿಧಾನ ವಿರೋಧಿ ಕಾರ್ಯಾಚರಣೆ. ದೇಶದ ಯಾವುದೇ ಭಾಗದಲ್ಲಿ ಸರ್ಕಾರವೇ ಮುಂದೆ ನಿಂತು ಭಾಷಾ ಸಮುದಾಯವನ್ನು ಬೀದಿಗೆ ತಳ್ಳಿದ ಉದಾಹರಣೆ ಇಲ್ಲ.
(5/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಗೋವಾದಲ್ಲಿ ಹೀಗೆ ಕನ್ನಡಿಗರನ್ನು ಗುರಿಯಾಗಿಟ್ಟುಕೊಂಡು ಅಲ್ಲಿನ ಸರ್ಕಾರ ತೆರವು ಕಾರ್ಯಾಚರಣೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಆರನೇ ಬಾರಿ ಇಂಥ ದುಷ್ಕೃತ್ಯವನ್ನು ಎಸಗುತ್ತಿದೆ. ಇದು ನಿಸ್ಸಂಶಯವಾಗಿ ಜನಾಂಗೀಯ ದ್ವೇಷದ ಕುಕೃತ್ಯ. ಹೀಗಾಗಿ ಗೋವಾ ಸರ್ಕಾರವನ್ನು ಕೂಡಲೇ ವಜಾಗೊಳಿಸಬೇಕು. (4/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ನಾಲ್ಕು ದಶಕಗಳಿಂದ ಆ ಪ್ರದೇಶದಲ್ಲಿ ವಾಸವಾಗಿದ್ದ ಕನ್ನಡಿಗರನ್ನು ಏಕಾಏಕಿ ತೆರವುಗೊಳಿಸಲಾಗಿದೆ. ಹದಿನೈದು ಕನ್ನಡಿಗರ ಕುಟುಂಬಗಳು ಬೀದಿಪಾಲಾಗಿವೆ. ಸಂತ್ರಸ್ಥ ಕುಟುಂಬಗಳಿಗೆ ಯಾವುದೇ ಪುನರ್ವಸತಿ ನೀಡಲಾಗಿಲ್ಲ. ಸಿರಿಯಾ, ಲೆಬೆನಾನ್‌ ದೇಶಗಳಲ್ಲಿ ನಡೆಯುತ್ತಿರುವುದು ಗೋವಾದಲ್ಲಿ ನಡೆಯುತ್ತಿದೆ.
(3/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಉತ್ತರ ಗೋವಾದ ಸಂಗೋಲ್ಡಾ ಪ್ರದೇಶದಲ್ಲಿ ನಿನ್ನೆ 15 ಕ್ಕೂ ಹೆಚ್ಚು ಕನ್ನಡಿಗರ ಮನೆಗಳನ್ನು ಜೆಸಿಬಿ ಬಳಿಸಿ ಧ್ವಂಸಗೊಳಿಸಲಾಗಿದೆ, ಅವರಿಗೆ ಅನ್ನ ನೀರು ಸೂರು ಇಲ್ಲದಂತೆ ಮಾಡಲಾಗಿದೆ. ಕನ್ನಡಿಗರ ಮನಸು ಭಾರವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲು ಸಾಧ್ಯವಿಲ್ಲ.
(2/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಗೋವಾ ಸರ್ಕಾರ ಮತ್ತೆ ಕನ್ನಡಿಗರ ಮನೆಗಳನ್ನು ಕೆಡವಿ ಒಕ್ಕೆಲೆಬ್ಬಿಸುತ್ತಿದ್ದು, ಇಡೀ ಗೋವಾದಲ್ಲಿ ಕನ್ನಡಿಗರು ಯಾರೂ ಇರಬಾರದು ಎಂಬ ತೀರ್ಮಾನಕ್ಕೆ ಬಂದಂತಿದೆ. ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಗೋವಾ ಸರ್ಕಾರವನ್ನು ವಜಾಗೊಳಿಸಿ, ಕನ್ನಡಿಗರಿಗೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸುತ್ತೇನೆ. (1/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ನಾಡಿನ ಸಮಸ್ತ ಜನತೆಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಪ್ರೀತಿ, ಸೌಹಾರ್ದತೆಯ ಸಂಕೇತವಾದ ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ ಕರುಣಿಸಲಿ.

ನಾಡಿನ ಸಮಸ್ತ ಜನತೆಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಪ್ರೀತಿ, ಸೌಹಾರ್ದತೆಯ ಸಂಕೇತವಾದ ಈ ಹಬ್ಬವು ಎಲ್ಲರಿಗೂ ಸುಖ, ಸಂತೋಷ ಕರುಣಿಸಲಿ. #EidulFitr2024
account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ತೊಲಗಲಿ ದುಃಖ, ತೊಲಗಲಿ ಮತ್ಸರ,
ಪ್ರೇಮಕೆ ಮೀಸಲು ನವ ಸಂವತ್ಸರ!
ನಮ್ಮೆದೆಯಲ್ಲಿದೆ ಸುಖನಿಧಿ ಎಂದು
ಹೊಸ ಹೂಣಿಕೆಯನು ತೊಡಗಿಂದು!

ಮಾವಿನ ಬೇವಿನ ತೋರಣ ಕಟ್ಟು,
ಬೇವುಬೆಲ್ಲಗಳನೊಟ್ಟಿಗೆ ಕುಟ್ಟು!
ಜೀವನವೆಲ್ಲಾ ಬೇವೂಬೆಲ್ಲ;
ಎರಡೂ ಸವಿವನೆ ಕಲಿ ಮಲ್ಲ!

- ಕುವೆಂಪು

ನಾಡಿನ‌ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.

ತೊಲಗಲಿ ದುಃಖ, ತೊಲಗಲಿ ಮತ್ಸರ, ಪ್ರೇಮಕೆ ಮೀಸಲು ನವ ಸಂವತ್ಸರ! ನಮ್ಮೆದೆಯಲ್ಲಿದೆ ಸುಖನಿಧಿ ಎಂದು ಹೊಸ ಹೂಣಿಕೆಯನು ತೊಡಗಿಂದು! ಮಾವಿನ ಬೇವಿನ ತೋರಣ ಕಟ್ಟು, ಬೇವುಬೆಲ್ಲಗಳನೊಟ್ಟಿಗೆ ಕುಟ್ಟು! ಜೀವನವೆಲ್ಲಾ ಬೇವೂಬೆಲ್ಲ; ಎರಡೂ ಸವಿವನೆ ಕಲಿ ಮಲ್ಲ! - ಕುವೆಂಪು ನಾಡಿನ‌ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.
account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದಾಗಿ ಮೊದಲು ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮಹಾರಾಷ್ಟ್ರದಿಂದ ನಮಗೆ ಬರಬೇಕಾಗಿರುವ ನೀರು ಬರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜಕಾರಣಿಗಳು ಚುನಾವಣಾ ಪ್ರಚಾರಕ್ಕೆ ಬರದಂತೆ ತಡೆಯಬೇಕಾಗುತ್ತದೆ. (6/6)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಈ ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಿಗೆ ಬಾಯಿ ಇಲ್ಲದಂತಾಗಿದೆ. ಅವರೆಲ್ಲ ಈಗ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ತೊಡಗಿದ್ದಾರೆ. ರಾಜಕೀಯ ಪಕ್ಷಗಳ ಉನ್ನತ ನಾಯಕರು ಈ ಭಾಗದಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ, ಆದರೆ ಜನರ ಕುಡಿಯುವ ನೀರಿನ ಬವಣೆಯ ಕುರಿತು ಚಕಾರ ಎತ್ತುತ್ತಿಲ್ಲ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. (5/6)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗು ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್ ನಾಥ್ ಶಿಂಧೆಯವರಿಗೆ ಪತ್ರ ಬರೆದಿದ್ದಾರೆ. ಆದರೆ ಮಹಾರಾಷ್ಟ್ರ ಇದಕ್ಕೆ ಸ್ಪಂದಿಸುತ್ತಿಲ್ಲ. (4/6)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಬಚಾವತ್ ಆಯೋಗದ ತೀರ್ಪಿನ ಪ್ರಕಾರ ಮಹಾರಾಷ್ಟ್ರ ಸರ್ಕಾರ ರಾಜ್ಯದ ಪಾಲಿನ 15 ಟಿಎಂಸಿ ನೀರು ಕೊಟ್ಟಿಲ್ಲ. ಮಹಾರಾಷ್ಟ್ರದ ಜಲಾಶಯಗಳಲ್ಲಿ ನೀರಿದ್ದರೂ ಕೂಡ ನೀರು ಬಿಡುತ್ತಿಲ್ಲ, ನಮ್ಮ ರಾಜ್ಯದ ಎಲ್ಲ ಪಕ್ಷಗಳ ನಾಯಕರೂ ಒಂದಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿ, ನೀರು ಬಿಡುಗಡೆಯಾಗುವಂತೆ ನೋಡಬೇಕಿತ್ತು. ಆದರೆ ಆ ಕೆಲಸ ಆಗುತ್ತಿಲ್ಲ. (3/6)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಕಲಬುರ್ಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ನದಿ, ಕೆರೆ, ಹಳ್ಳ, ಬಾವಿಗಳು ಬತ್ತಿಹೋಗಿವೆ. ಜನರಿಗೆ ನೀರಿಲ್ಲ, ಜಾನುವಾರುಗಳು ನೀರು, ಮೇವು ಇಲ್ಲ. ಇಂಥ ಸನ್ನಿವೇಶದಲ್ಲಿ ಜನಪ್ರತಿನಿಧಿಗಳು ಮೊದಲು ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು. (2/6)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ ಮಾಡಿಕೊಳ್ಳಿ. ಇಲ್ಲದೇ ಹೋದಲ್ಲಿ ಈ ಭಾಗದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ. (1/6)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದಂತೆ ಫೆ.28ರೊಳಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಕಡ್ಡಾಯಗೊಳಿಸುವ ವಿಧೇಯಕವನ್ನು ಸಂಪೂರ್ಣ ಜಾರಿಗೆ ತರಬೇಕು. ಜೊತೆಗೆ ವಿಧೇಯಕದಲ್ಲಿ ಹೇಳಲಾದ ಎಲ್ಲ ಅಂಶಗಳನ್ನೂ ಜಾರಿಗೊಳಿಸಬೇಕು. ಯಾರ, ಯಾವ ರೀತಿಯ ಒತ್ತಡಕ್ಕೂ ಮಣಿಯಕೂಡದು. (7/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಇಂದು ನಡೆದ ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಸರ್ಕಾರ, ಪೊಲೀಸ್ ಇಲಾಖೆ ನಮ್ಮನ್ನು ನಡೆಸಿಕೊಂಡ ರೀತಿಯ ಕುರಿತು ಮಾತನಾಡಿದ್ದಾರೆ. ಅವರಿಗೆ ವಿಶೇಷ ಕೃತಜ್ಞತೆಗಳು. ಕನ್ನಡಕ್ಕಾಗಿ ಎಷ್ಟು ಬೇಕಾದರೂ ಮೊಕದ್ದಮೆಗಳನ್ನು ಎದುರಿಸಲು ನಾವು ತಯಾರಾಗಿದ್ದೇವೆ. ಅದರಲ್ಲಿ ಯಾವ ಹಿಂಜರಿಕೆಯೂ ನಮಗಿಲ್ಲ. (6/7)

account_circle
ನಾರಾಯಣಗೌಡ್ರು.ಟಿ.ಎ | ‌Narayanagowdru T.A.(@narayanagowdru) 's Twitter Profile Photo

ಡಿ.27ರ ನಮ್ಮ ಚಳವಳಿಯ ಹಿನ್ನೆಲೆಯಲ್ಲಿ ನನ್ನ ಮೇಲೆ, ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರ ಮೇಲೆ ಸರ್ಕಾರ ಹಲವಾರು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿಕೊಂಡು ನಮ್ಮನ್ನು ಜೈಲಿಗೆ ಕಳುಹಿಸಿತು. ಏನೇ ಕಷ್ಟ ಅನುಭವಿಸಿದರೂ ನಮ್ಮ ಹೋರಾಟ ಗುರಿ ಮುಟ್ಟಿದೆಯೆಂಬ ಸಂತಸ ನನ್ನದು. (5/7)

account_circle